ಗಂಗೊಳ್ಳಿ, ಜ.10: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಯಾದಗಿರಿಯಲ್ಲಿ ನಡೆದ ರಾಜ್ಯಮಟ್ಟದ ಟೆನ್ನಿ ಕಾಯ್ಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಖಾರ್ವಿ ಮತ್ತು ಮಾನ್ಯ ಖಾರ್ವಿ ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಸಹನಾ ಖಾರ್ವಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವೈಭವ್ ಮತ್ತು ವಿಶ್ವಾಸ್ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಬಳಗ ಅಭಿನಂದನೆ ಸಲ್ಲಿಸಿದೆ.
ರಾಜ್ಯಮಟ್ಟದ ಟೆನ್ನಿ ಕಾಯ್ಟ್: ಸರಸ್ವತಿ ವಿದ್ಯಾಲಯ ಪದವಿಪೂರ್ವ ವಿದ್ಯಾರ್ಥಿನಿಯರ ಸಾಧನೆ
ರಾಜ್ಯಮಟ್ಟದ ಟೆನ್ನಿ ಕಾಯ್ಟ್: ಸರಸ್ವತಿ ವಿದ್ಯಾಲಯ ಪದವಿಪೂರ್ವ ವಿದ್ಯಾರ್ಥಿನಿಯರ ಸಾಧನೆ
Date: