Sunday, February 23, 2025
Sunday, February 23, 2025

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

Date:

ಕೋಟ, ಜ.11: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಛೇರಿಗೆ ನಬಾರ್ಡ್ ಉಪ ಮಹಾಪ್ರಬಂಧಕರಾದ ಯೋಗೀಶ ಇವರ ನೇತೃತ್ವದಲ್ಲಿ ಒಡಿಸ್ಸಾ ರಾಜ್ಯದ ಭುವನೇಶ್ವರದ ಸಹಕಾರ ಇಲಾಖೆ ಮತ್ತು ಆರ್‌ಸಿಎಸ್ ಅಧಿಕಾರಿಗಳು ಭೇಟಿ ನೀಡಿದರು. ಅಧಿಕಾರಿಗಳನ್ನು ಕೋಟ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಸ್ವಾಗತಿಸಿ, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ನಬಾರ್ಡ್ ಅಧಿಕಾರಿಗಳು ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡರು.

ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಸರ್ವತೋಮುಖ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಬಂಡವಾಳವನ್ನು ಸಾಲ ನೀಡುವಿಕೆಯೊಂದಿಗೆ ಸಾರ್ವಜನಿಕರಿಗೆ ಸಹಕಾರಿಯಾಗುವಂತಹ ಇತರ ವ್ಯವಹಾರಗಳಲ್ಲಿ ತೊಡಗಿಸಿ ಅಭಿವೃದ್ಧಿ ಹೊಂದುವಂತೆ ಹಾಗೂ ಸಂಘದ ಎಲ್ಲಾ ಶಾಖೆಗಳಿಗೆ ಸ್ವಂತ ನಿವೇಶನ ಖರೀದಿಸುವಂತೆ ಅವರು ಸಲಹೆ ನೀಡಿದರು. ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!