ಉಡುಪಿ, ಜ.14: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಉಡುಪಿ, ಸ್ವರ್ಣ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಉಡುಪಿ ವತಿಯಿಂದ ಉಡುಪಿಯ ರಥಬೀದಿಯ ಶ್ರೀ ಬಂಢಾರಕೇರಿ ಮಠದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಶ್ರೀನಿವಾಸ್ ರಾವ್ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವವಾಹಕ ಅಧಿಕಾರಿ ವಿಜಯಾ, ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಲಕ್ಷೀಶ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ನವ್ಯ, ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ತಾಲೂಕು ಅಭಿಯಾನ ನಿರ್ವಹಣಾ ಘಟಕದ ಪ್ರಶಾಂತ್, ಸವಿತ, ಸುಜಾತಾ ಹಾಗೂ ಬಬೀತಾ ಉಪಸ್ಥಿತರಿದ್ದರು. ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಸುಮಾರು 30 ಮಹಿಳಾ ಉದ್ಯಮಿದಾರರು ಈ ಮಾರಾಟ ಮೇಳದಲ್ಲಿ ಭಾಗವಹಿಸಿದ್ದರು. ಮಾರಾಟ ಮಳಿಗೆಯಲ್ಲಿ ಗ್ರಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಮಣ್ಣಿನ ಹಣತೆ, ಗೋ ಉತ್ಪನ್ನ, ಗ್ರೂಬ್ಯಾಗ್, ಚನ್ನಪಟ್ಟಣ ಗೊಂಬೆ, ವಿವಿಧ ಬಗೆಯ ಉಪ್ಪಿನಕಾಯಿ, ಸಾಂಬಾರ್ ಪೌಡರ್ ಇತ್ಯಾದಿ ಉತ್ಪನ್ನಗಳು ಲಭ್ಯ.