ಉಡುಪಿ, ಜ.14: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024 ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಅದಿತಿ ನಾವಡ ಶೇಕಡಾ 99.5 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾಳೆ. ಇವರು ಕುಂದಾಪುರದ ಡಾ. ಸಂದೀಪ ನಾವಡ ಹಾಗೂ ಡಾ. ಪ್ರೀತಿ ನಾವಡ ದಂಪತಿಯ ಪುತ್ರಿ. ಇವರು ಹಟ್ಟಿಯಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.