Sunday, February 23, 2025
Sunday, February 23, 2025

ಉಚಿತ ನೇತ್ರ ತಪಾಸಣಾ ಶಿಬಿರ, ರಸ್ತೆ ಸುರಕ್ಷತಾ ಜಾಗೃತಿ ಜಾಥ

ಉಚಿತ ನೇತ್ರ ತಪಾಸಣಾ ಶಿಬಿರ, ರಸ್ತೆ ಸುರಕ್ಷತಾ ಜಾಗೃತಿ ಜಾಥ

Date:

ಕೋಟ, ಜ.15: ಪ್ರಸ್ತುತ ದಿನಗಳಲ್ಲಿ ರಸ್ತೆ ಅವಘಡಗಳು ಹೆಚ್ಚುತ್ತಿವೆ, ಇದಕ್ಕೆ ಕಾರಣ ಯುವ ಸಮುದಾಯದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಕೊರತೆಯೇ ಕಾರಣ ಎಂದು ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಹೇಳಿದರು. ಮಂಗಳವಾರ ಕೋಟದ ಮಾಂಗಲ್ಯ ಮಂದಿರಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಉಪವಿಭಾಗ ಹಾಗೂ ಬ್ರಹ್ಮಾವರ ವೃತ್ತ, ಕೋಟ ಪೊಲೀಸ್ ಠಾಣೆ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರಸಾದ ನೇತ್ರಾಲಯ ಉಡುಪಿ ಇವರ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟ ಇವರ ವತಿಯಿಂದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಪ್ರಸಾದ್ ನೇತ್ರಾಲಯದ ಮುಖ್ಯಸ್ಥ ಡಾ. ಕೃಷ್ಣಪ್ರಸಾದ್ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಉಡುಪಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ವಹಿಸಿ ಪೋಲಿಸ್ ಇಲಾಖೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅಭ್ಯಾಗತರಾಗಿ ಉಡುಪಿ ಪೋಲಿಸ್ ಇಲಾಖೆಯ ಡಿವೈಎಸ್ ಪಿ ಡಿ.ಟಿ ಪ್ರಭು, ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್, ಕೋಟ ಪೋಲಿಸ್ ಠಾಣೆಯ ಅಪರಾಧ ದಳದ ಎಸ್.ಐ ಸುಧಾ ಪ್ರಭು, ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಮಾಧವ ಪೈ ಉಪಸ್ಥಿತರಿದ್ದರು. ಕೋಟ ಠಾಣೆಯ ಪಿಎಸ್ ಐ ರಾಘವೇಂದ್ರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಪ್ರಾರ್ಥಿಸಿದರು. ಪತ್ರಕರ್ತ ಚಂದ್ರಶೇಖರ್ ಬೀಜಾಡಿ ನಿರೂಪಿಸಿ ವಂದಿಸಿದರು.

ರಸ್ತೆ ಸುರಕ್ಷತಾ ಜಾಗೃತಿಯ ಅಂಗವಾಗಿ ಕೋಟ ಅಮೃತೇಶ್ವರಿ ಸರ್ಕಲ್ ಬಳಿಯಿಂದ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಕೋಟ ಅಮೃತೇಶ್ವರಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಚಾಲನೆ ನೀಡಿದರು. ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್ ಇದ್ದರು. ಜಾಥದಲ್ಲಿ ಇಸಿಆರ್ ಕಾಲೇಜಿನ ವಿದ್ಯಾರ್ಥಿಗಳು, ಪಂಚವರ್ಣ ಸಂಘಟನೆ, ಅಮೃತ ಯುವಕ ಸಂಘ ಸೇರಿದಂತೆ ವಿವಿಧ ಸ್ಥಳೀಯ ಸಂಘಟನೆಗಳು ಭಾಗಿಯಾದವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!