ಕಾಪು, ಜ.15: 2 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ ಕೆರೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ಶ್ರೀ ವಿಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅರುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಪ್ರಪುಲ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಗುಡ್ಡೆಚ್ಚಿ ಹಾಗೂ ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.
ಎಲ್ಲೂರು: ಅಭಿವೃದ್ಧಿಗೊಂಡ ಕೆರೆಯ ಉದ್ಘಾಟನೆ

ಎಲ್ಲೂರು: ಅಭಿವೃದ್ಧಿಗೊಂಡ ಕೆರೆಯ ಉದ್ಘಾಟನೆ
Date: