Saturday, January 18, 2025
Saturday, January 18, 2025

ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ

ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ

Date:

ಕಾಪು, ಜ.17: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೊಡಮಾಡಿದ ಪೀಠೋಪಕರಣಗಳನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ಜನಜಾಗೃತಿ ವೇದಿಕೆ ನವೀನ್ ಅಮೀನ್, ವಲಯ ಅಧ್ಯಕ್ಷರಾದ ಪ್ರಸಾದ್ ಆಚಾರ್ಯ, ಶಿಕ್ಷಣ ರಕ್ಷಕ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ, ಕಲ್ಪವೃಕ್ಷ ಕನ್ನಡ ಶಾಲೆಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ್ ರಾವ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶ್ಯಾನುಭಾಗ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಅಬ್ದುಲ್ ಕರೀಂ, ಕಲ್ಪವೃಕ್ಷ ಕನ್ನಡ ಶಾಲೆಯ ಸಮಿತಿ ಕಾರ್ಯದರ್ಶಿ ಮಹಮ್ಮದ್ ಆಶ್ರಫ್, ಗ್ರಾಮ ಪಂಚಾಯತ್ ಸದಸ್ಯರಾದ ಶರ್ಮಿಳಾ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷರಾದ ನಾಗಭೂಷಣ್ ರಾವ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!