ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ರಾಜ್ಯದ ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಕಸಾಪ ಉಡುಪಿ ತಾಲೂಕಿನಿಂದ ಮತ್ತಷ್ಟು ಪುಸ್ತಕಗಳನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರಿಗೆ ಹಸ್ತಾಂತರಿಸಲಾಯಿತು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಮನೆಯೇ ಗ್ರಂಥಾಲಯದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರಿದ್ದರು.
ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
Date: