Sunday, February 23, 2025
Sunday, February 23, 2025

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

Date:

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಇಂದು ಸ್ಥಳ ಭೇಟಿ ಮಾಡಿ, ವೀಕ್ಷಿಸಿದರು. ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಅದರ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಕಬ್ಬಿಣದ ಗಡರ‍್ಸ್ ನಿರ್ಮಾಣದ ಕಾಮಗಾರಿಯು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಅದನ್ನು ರೈಲ್ವೇ ಹಳಿಗಳ ಮೇಲ್ಭಾಗದಲ್ಲಿ ಸೇತುವೆಯಾಗಿ ನಿರ್ಮಿಸಲು ಅಗತ್ಯವಿರುವ ಸಿವಿಲ್ ಕಾಮಗಾರಿಗಳನ್ನು ಸಹ ತ್ವರಿತವಾಗಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲಕೃಷ್ಣ, ಗುತ್ತಿಗೆದಾರರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!