Sunday, February 23, 2025
Sunday, February 23, 2025

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

Date:

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ಜನವರಿ 27 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಉಚಿತ ಊಟ-ಉಪಹಾರಗಳನ್ನು ಒದಗಿಸಲಾಗುವುದು. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ಡಾ.ಶಿವರಾಮ ಕಾರಂತ ಟ್ರಸ್ಟ್ ಮೊ.ನಂ: 6362517472, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ಮೊ.ನಂ: 9980462972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!