Monday, February 24, 2025
Monday, February 24, 2025

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

Date:

ಉಡುಪಿ, ಜ.20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಸಹಯೋಗದೊಂದಿಗೆ ತುಮಕೂರಿನಲ್ಲಿ ರವಿವಾರ ನಡೆದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಕಳದ ಪತ್ರಕರ್ತರ ಹಾಗೂ ಸಂಘದ ಸದಸ್ಯ ಹರಿಪ್ರಸಾದ್ ನಂದಳಿಕೆ ಅವರಿಗೆ ಆರ್ ಎಲ್ ವಾಸುದೇವ ಪ್ರಶಸ್ತಿ(ಅರಣ್ಯ ಅತ್ಯುತ್ತಮ ವರದಿ)ಯನ್ನು ಪ್ರದಾನ ಮಾಡಲಾಯಿತು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!