ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region IV), ರೋಟರಿ ಕ್ಲಬ್ ಬಾರ್ಕೂರು ಹಾಗೂ ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಇವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿಯಲ್ಲಿ ಜರುಗಿತು.
ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ, ಕಾರ್ಯದರ್ಶಿ ಉದಯ್ ಎಸ್. ಶೆಟ್ಟಿ, ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷರಾದ ಗಣೇಶ ಶೆಟ್ಟಿ ಬಿ., ನಾರಾಯಣ ನಾಯ್ಕ್, ಜಯಾನಂದ ಪೂಜಾರಿ, ಲಯನ್ಸ್ ಕ್ಲಬ್ ಸದಸ್ಯರು, ರೋಟರಿ ಕ್ಲಬ್ ಸದಸ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.