Monday, January 20, 2025
Monday, January 20, 2025

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

Date:

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಯಶಸ್ವಿಯಾಗಿ ಮುಕ್ತಾಯಗೊಂಡಿತು. 2025 ರ ಜನವರಿ 17ರಂದು ಪ್ರಾರಂಭವಾದ ಪಂದ್ಯಾವಳಿಯು ಭಾಗವಹಿಸಿದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು. ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭವು ಗಣ್ಯರ ಉಪಸ್ಥಿತಿಯಿಂದ ಅದ್ದೂರಿಯಾಗಿ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಆನಂದ್ ವೇಣುಗೋಪಾಲ್ , ಸಿಓಓ ಬೋಧನಾ ಆಸ್ಪತ್ರೆ, ಮಾಹೆ, ಮಣಿಪಾಲ ಭಾಗವಹಿಸಿದ್ದರು. ಇವರೊಂದಿಗೆ, ಡಾ. ಪದ್ಮರಾಜ್ ಹೆಗ್ಡೆ ಡೀನ್-ಕೆ ಎಂ ಸಿ ಮಣಿಪಾಲ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮತ್ತು ಅದಾನಿ ಪವರ್ ಲಿ ನ ಸ್ಟೇಷನ್ ಹೆಡ್ ಶ್ರೀಧರ್ ಗಣೇಶನ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ. ಅವಿನಾಶ್ ಶೆಟ್ಟಿ ಪಂದ್ಯಾವಳಿಯಲ್ಲಿ ತೋರಿದ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದರು. ಅವರು ಮಾತನಾಡುತ್ತಾ ಸಮುದಾಯದ ಸಂಬಂಧ ಗಟ್ಟಿ ಗೊಳಿಸುವಲ್ಲಿ ಹಾಗೂ ಬೆಳೆಸುವಲ್ಲಿ ಮತ್ತು ಬಲವಾದ ಕಾರ್ಪೊರೇಟ್ ನೆಟ್‌ವರ್ಕ್‌ಗಳನ್ನು ನಿರ್ಮಿಸುವಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ಒತ್ತಿ ಹೇಳಿದರು.

ಪ್ರತಿಷ್ಠಿತ ಕಸ್ತೂರ್ಬಾ ಹಾಸ್ಪಿಟಲ್ ಕ್ರಿಕೆಟ್ ಲೀಗ್ ಟ್ರೋಫಿಯನ್ನು ಕ್ವೆಸ್ ಕಾರ್ಪ್ ಮಣಿಪಾಲದ ತಂಡ ಪಡೆದುಕೊಂಡಿತು. ಅದಾನಿ ಪವೆರ್ ಲಿ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು. ಸಮಾರಂಭದಲ್ಲಿ ವೈಯಕ್ತಿಕ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಯಿತು. ಗಣೇಶ್ ಸರಣಿ ಶ್ರೇಷ್ಠ ಗೌರವವನ್ನು ಸ್ವೀಕರಿಸಿದರು. ಸುಕೇಶ್ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಗುರುತಿಸಲ್ಪಟ್ಟರು ಮತ್ತು ಜಾಯ್ ಅಸಾಧಾರಣ ಬೌಲಿಂಗ್ ಕೌಶಲ್ಯಕ್ಕಾಗಿ ಪ್ರಶಸ್ತಿಗಳನ್ನು ಪಡೆದರು.

ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್, ಜಿಬು ಥಾಮಸ್, ಮೋಹನ್ ಶೆಟ್ಟಿ, ಕೃಷ್ಣ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಸ್ತೂರ್ಬಾ ಆಸ್ಪತ್ರೆ ವೈದ್ಯರು ಮತ್ತು ಪಂದ್ಯ ಸಂಘಟಕರ ನಡುವೆ ಪ್ರದರ್ಶನ ಪಂದ್ಯ ನಡೆಯಿತು.

.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಯು.ಬಿ.ಎನ್.ಡಿ., ಜ.20: ಇಸ್ರೇಲ್ ಬಂಧನದಲ್ಲಿದ್ದ 90 ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಯಿತು....
error: Content is protected !!