ಪೆರ್ಡೂರು, ಜ.22: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಡಿ ಕೊರಗರ ಕಾಲೋನಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿದರು. ಕೊರಗ ಸಮುದಾಯದವರ ಮೂಲಭೂತ ಸೌಕರ್ಯಗಳಾದ ವಸತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಇತರೆ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು.
ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ತುಕಾರಾಮ್ ನಾಯಕ್, ಸಚಿನ್ ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಕೊರಗ ಮುಖಂಡರಾದ ಬೊಗ್ರ ಕೊರಗ ಹಾಗೂ ಐಟಿಡಿಪಿ ಅಧಿಕಾರಿಗಳಾದ ವಿಶ್ವನಾಥ್ ಉಪಸ್ಥಿತರಿದ್ದರು.