Sunday, February 23, 2025
Sunday, February 23, 2025

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಮಲ್ಪೆ: ಸಿರಿಧಾನ್ಯ ರೋಡ್ ಶೋ

Date:

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಂಗಳವಾರ ಮಲ್ಪೆ ಪೊಲೀಸ್ ಠಾಣೆಯ ಬಳಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು, ಅರಿತು ಅವುಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಸಿರಿಧಾನ್ಯಗಳು ಉತ್ತಮ ಪೋಷಕಾಂಶವುಳ್ಳ ಆಹಾರವಾಗಿರುವುದರಿಂದ ಇದರ ಸೇವನೆಯ ಜೊತೆಗೆ ಸಿರಿಧಾನ್ಯಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದರು.

ನಗರಸಭಾ ಸದಸ್ಯ ವಿಜಯ್ ಕೊಡವೂರು, ಅಪರ ಜಿಲ್ಲಾಧಿಕಾರಿ ನಾಗರಾಜ ವಿ ನಾಯಕ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ., ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಲಿ, ಮಲ್ಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರವಿ, ಕೆ.ವಿ.ಕೆ ಮುಖ್ಯಸ್ಥ ಧನಂಜಯ, ಕೃಷಿಕ ಸಂಘದ ರಾಜ್ಯ ಪ್ರತಿನಿಧಿ ಪ್ರದೀಪ್ ಹೆಬ್ಬಾರ, ಬೈಂದೂರು ತಾಲೂಕು ಕೃಷಿಕ ಸಮಾಜ ವೆಂಕಟೇಶ ಹೆಬ್ಬಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!