ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಜನವರಿ 25 ರಂದು ಬೆಳಗ್ಗೆ 11.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ಹಾಗೂ ಪ್ರವಾಸೋದ್ಯಮ ಇಲಾಖೆಯ ನೂತನ ವೆಬ್‌ಸೈಟ್ ಅನಾವರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೃಷಿ ಪ್ರವಾಸೋದ್ಯಮಕ್ಕೆ ಇಲಾಖೆಗಳಿಂದ ದೊರಕುವ ಸವಲತ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ
Date: