Saturday, October 3, 2026
Saturday, October 3, 2026

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

Date:

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಜನವರಿ 25 ರಂದು ಬೆಳಗ್ಗೆ 11.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ಹಾಗೂ ಪ್ರವಾಸೋದ್ಯಮ ಇಲಾಖೆಯ ನೂತನ ವೆಬ್‌ಸೈಟ್ ಅನಾವರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೃಷಿ ಪ್ರವಾಸೋದ್ಯಮಕ್ಕೆ ಇಲಾಖೆಗಳಿಂದ ದೊರಕುವ ಸವಲತ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!