Friday, February 28, 2025
Friday, February 28, 2025

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

Date:

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ ಅವರ ನಿವಾಸದಲ್ಲಿ ಉಡುಪಿ ವಕೀಲರ ಸಂಘದ ನಿಯೋಗ ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘವು ಮಾರ್ಚ್ ತಾ. 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಗಳನ್ನು ಉದ್ಘಾಟಿಸುವಂತೆ ಆಹ್ವಾನಿಸಿತು. ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಟಕ್ಕೆ ಶುಭ ಹಾರೈಸಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಕ್ರೀಡಾಕೂಟದ ಸಂಚಾಲಕ ಮಿತ್ರ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಟಿ. ವಿಜಯ ಕುಮಾರ್ ಶೆಟ್ಟಿ ಹಾಗೂ ಕ್ರೀಡಾಕೂಟದ ಆಹ್ವಾನ ಸಮಿತಿ ಸಂಯೋಜಕ ಆರೂರ್ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!