Monday, January 27, 2025
Monday, January 27, 2025

ಪ್ರವಾಸಿಗರನ್ನು ಅತಿಥಿಗಳಂತೆ ಸತ್ಕರಿಸಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಪ್ರವಾಸಿಗರನ್ನು ಅತಿಥಿಗಳಂತೆ ಸತ್ಕರಿಸಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

Date:

ಉಡುಪಿ, ಜ.25: ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಾಣುವುದರೊಂದಿಗೆ ಅವರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೆ ಹೆಚ್ಚು ಪ್ರವಾಸಿಗರು ಬೇಟಿ ನೀಡಿದ್ದಾರೆ ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇಕಡ 70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೊದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು ಉತ್ತೇಜಿಸಬೇಕು ಇತ್ತಿಚೀನ ದಿಗಳಲ್ಲಿ ಕೃಷಿ ಪ್ರವಾಸೋದ್ಯಮವು ಬೆಳೆಯುತ್ತಿದೆ ಇದರ ಭಾಗಿದಾರರಿಗೆ ಸರಕಾರ ವತಿಯಿಂದ ಸಹಕಾರ ನೀಡಲಾಗುವುದು ಎಂದರು. ಜಿಲ್ಲೆಯಲ್ಲಿ ಪ್ರವಾಸೊದ್ಯಮದಿಂದಾಗಿ ಅನೇಕ ಜನರಿಗೆ ಉದ್ಯೋಗ ಲಭಿಸುದರ ಜೊತೆಗೆ ಆರ್ಥಿಕ ಲಾಭವಾಗುತ್ತದೆ ಎಂದ ಅವರು ಪ್ರವಾಸೊದ್ಯಮ ತಾಣಗಳಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡಿ ಅಲ್ಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು, ಅಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದು ಸೂಕ್ತ ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಲಾಂಛಣ ಅನಾವರಣ ಮಾಡಿ ಮಾತನಾಡಿ ಕೃಷಿ ಪ್ರವಾಸೋದ್ಯಮಕ್ಕೆ ಉತೇಜನ ನೀಡಬೇಕು ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದ ಅವರು, ಪ್ರಜ್ಞಾವಂತರಾದ ಈ ಜಿಲ್ಲೆಯ ಜನರು ಸಂಸ್ಕಾರಯುತವಾಗಿ ಪ್ರವಾಸಿಗರೊಂದಿಗೆ ನಡೆದುಕೊಂಡು ಹೆಚ್ಚೆಚ್ಚು ಜನರನ್ನು ಆಕರ್ಷಿಸಬೇಕೆಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೊಬಗನ್ನು ಹಾಗೂ ಇಲ್ಲಿನ ಸಂಸ್ಕೃತಿಯನ್ನು ಸವಿಯಲು ಬರುತ್ತಾರೆ ಇದಕ್ಕೆ ನಾವುಗಳು ಪೂರಕವಾಗಿ ಸ್ಪಂದಿಸಬೇಕು ಎಂದ ಅವರು ಕೃಷಿ ಪ್ರವಾಸೋಧ್ಯಮದಲ್ಲಿ ಬಾರಿ ಬಂಡವಾಳ ಹೂಡಿಕೆಯ ಅವಶ್ಯಕತೆ ಇರುವುದಿಲ್ಲ, ಇದರಿಂದ ಕೃಷಿಯ ಆದಾಯದ ಜೊತೆಗೆ ಹೆಚ್ಚುವರಿ ಆದಾಯ ಹೊಂದಲು ಸಾಧ್ಯ ಎಂದರು. ರಾಜ್ಯದ ಜಿ.ಡಿ.ಪಿ ಗೆ ಕೊಡುಗೆ ನೀಡುವುದರಕಲ್ಲಿ ರಾಜ್ಯ 5ನೇ ಸ್ಥಾನದಲ್ಲಿ ಪಡೆದಿದೆ ಎಂದರು. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿದರು. ಪ್ರಗತಿ ಪರ ಕೃಷಿಕ ಇನ್ನಾ ಚಂದ್ರಕಾಂತ್ ರಾವ್ ಅವರು ಕೃಷಿ ಚಟುವಟಿಕೆ ಹಾಗೂ ಪ್ರವಾಸೊಧ್ಯಮ ಕುರಿತು ಉಪನ್ಯಾಸ ನೀಡಿದರು.

ಪ್ರವಾಸೋದ್ಯಮ ಇಲಾಖೆಯ ನೂತನ ವೆಬ್‌ಸೈಟ್ ಅನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ, ಜಿಲ್ಲಾ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ: ಕರಾಟೆ ಸಾಧಕಿ ಛಾಯಾ ಎಸ್.ಪೂಜಾರಿಗೆ ಸಾರ್ವಜನಿಕ ಸನ್ಮಾನ

ಪರ್ಕಳ, ಜ.27: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ...

ಉಡುಪಿ: ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಉಡುಪಿ, ಜ.26: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ...

ಲೋಕಹಿತಕ್ಕೆ ವಿಷ್ಣು ಸಹಸ್ರನಾಮ ಪರಿಣಾಮಕಾರಿ: ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್

ಕೋಟ, ಜ.26: ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪರಿಣಾಮಕಾರಿ ಎಂದು ಗೀತಾನಂದ...

ಸುನಾಗ್ ಆಸ್ಪತ್ರೆ: ಸಂಭ್ರಮದ ಗಣರಾಜ್ಯೋತ್ಸವ

ಉಡುಪಿ, ಜ.26: ಸುನಾಗ್‌ ಆಸ್ಪತ್ರೆಯ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವೈದ್ಯಾಧಿಕಾರಿಗಳು...
error: Content is protected !!