Monday, January 27, 2025
Monday, January 27, 2025

ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ಕಿರಣ್ ಎಸ್. ಗಂಗಣ್ಣನವರ್

ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ಕಿರಣ್ ಎಸ್. ಗಂಗಣ್ಣನವರ್

Date:

ಉಡುಪಿ, ಜ.25: ದೇಶದ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಹೊಂದಿ ಚುನಾವಣಾ ಪ್ರಕ್ರೀಯೆಯಲ್ಲಿ ತಪ್ಪದೇ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್. ಗಂಗಣ್ಣನವರ್ ಕರೆ ನೀಡಿದರು. ಅವರು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವದ ಪರಿಕಲ್ಪನೆಯು ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ರಾಜರುಗಳು ತಮ್ಮ ಆಳ್ವಿಕೆಯಲ್ಲಿ ನಡೆಸುತ್ತಿದ್ದ ಸಭೆ, ಓಲಗ, ಒಡ್ಡಲೊಗಳಲ್ಲಿ ಸಮಾಜ ಕಟ್ಟುವಂತಹ ಜನ ಸಮಾನ್ಯರ ಅನಿಸಿಕೆ ಅಭಿಪ್ರಾಯಗಳನ್ನು ಹೇಳಲು ಅವಕಾಶವಿತ್ತು ಇದು ಪ್ರಜಾಪ್ರಭುತ್ವದ ಒಂದು ಅಂಗ, ಪ್ರಸ್ತತ ಪ್ರಜಾಪ್ರಭುತ್ವದಲ್ಲಿ ಸಹಾ ವಿಧಾನಪರಿಷತ್ತು ವಿಧಾನಸಭೆ ಸಂಸತ್ತು ಮೇಲ್ಮನೆ ಕೆಳಮನೆ ಅಂತಹ ಸಂಸ್ಥೆಗಳು ನಿಯಮಾನುಸಾರ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿವೆ ಎಂದರು.

ಭಾರತದ ಪ್ರಜಾಸತಾತ್ಮಕ ಸಂಸ್ಥೆಗಳು ಎಷ್ಟು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಟೀಕೆ ಟಿಪ್ಪಣಿಗಳು ಇರುತ್ತವೆ ನಮ್ಮ ದೇಶದ ಜನ ಸಾಮಾನ್ಯರು ಚುನಾವಣೆಯಲ್ಲಿ ತೋರಿಸುವಂತಹ ಪ್ರಭುದ್ಧತೆಯಿಂದಾಗಿ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದರು ಕೂಡ ದೇಶದ ಆಡಳಿತಾತ್ಮಕ ಅಳವಡಿಸಿಕೊಂಡಿರುವಂತಹ ಪ್ರಜಾಸತಾತ್ಮಕ ವ್ಯವಸ್ಥೆ ತನ್ನ ಬಹುರೂಪಿ ಅಸ್ಥತ್ವದಲ್ಲಿ ಕೂಡ ತನ್ನತನವನ್ನು ಉಳಿಸಿಕೊಂಡಿದೆ ಎಂದರು. ದೇಶದಲ್ಲಿ ಕಾಲಕಾಲಕ್ಕೆ ನಡೆಯುವ ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತದರರು ಭಗವಹಿಸುವ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಅವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ರೀತಿಯ ಮತದಾರರ ದಿನಾಚಾರಣೆ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರ ಪ್ರತಿಯೊಬ್ಬ ನಾಗರಿಕರಿಗೂ ಹಕ್ಕು ಮತ್ತು ಕರ್ತ್ಯವ್ಯಗಳನ್ನು ನೀಡಿವೆ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುವ ರೀತಿಯಲ್ಲಿಯೇ ತಮ್ಮ ಜವಬ್ದಾರಿಯ ಕರ್ತವ್ಯವಾದ ಮತದಾನದಲ್ಲಿ ಭಾಗವಹಿಸಬೇಕು ಎಂದರು. ಯುವ ಮತದಾರರು ಅರ್ಜಿ ನಮೂನೆ 6 ರ ಅಡಿಯಲ್ಲಿ ವಾಸ ಸ್ಥಳ ಧೃಡಿಕರಣ ಪತ್ರ ಹಾಗೂ ಛಾಯ ಚಿತ್ರಗಳನ್ನು ನೀಡಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ಕೊಳ್ಳುವುದರೊಂದಿಗೆ ಚುನಾವಣೆ ಪ್ರಕ್ರೀಯೆಗಳಲ್ಲಿ ತೋಡಗಿಸಿಕೊಳ್ಳಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಡಯೇಟ್ ಕಾಲೇಜಿನ ಉಪ ಪ್ರಾಂಶುಪಾಲರು ಅಶೋಕ್ ಕಾಮತ್‌ ಮತದಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಚುನಾವಣಾ ಕರ್ತವ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ಹಾಗೂ ಮತದಾರರ ದಿನಚರಣೆ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, , ಉಡುಪಿ ತಾಲೂಕು ತಹಶೀಲ್ದಾರ್ ಪಿ.ಆರ್ ಗುರುರಾಜ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ವಿ ನಾಯಕ್ ಸ್ವಾಗತಿಸಿ, ಅಶೋಕ್ ಕಾಮತ್ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!