ಉಡುಪಿ, ಜ.25: ವಿಶ್ವದ 20 ಶೇಕಡಾ ಜನಸಂಖ್ಯೆಯನ್ನು ಹೊಂದಿರುವ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿಸುವ ನರೇಂದ್ರ ಮೋದಿಯವರ ಸಂಕಲ್ಪಕ್ಕೆ ಉತ್ತಮ ಶಿಕ್ಷಣವೇ ಅಡಿಪಾಯವಾಗಲಿದ್ದು, ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ಸದಾ ಸಹಕಾರ ನೀಡಲಿದೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 1450 ವಿದ್ಯಾರ್ಥಿಗಳಿಗೆ 25 ಲಕ್ಷದ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಉಡುಪಿ ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಮಾತನಾಡಿ, ತಮ್ಮ ಫೌಂಡೇಶನ್ ಮೂಲಕ ಶಿಕ್ಷಣ, ಆರೋಗ್ಯಕ್ಕೆ ವಿಶೇಷ ಸಹಕಾರ ನೀಡುತ್ತಾ ಸಾಮಾಜಿಕ ಬದ್ಧತೆ ಪ್ರದರ್ಶಿಸುವ ಶಾಸಕ ಯಶ್ಪಾಲ್ ಸುವರ್ಣ ರವರ ಕಾರ್ಯವೈಖರಿ ಸರ್ವರಿಗೂ ಪ್ರೇರಣೆ ಎಂದರು.
ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಉಡುಪಿ ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಸವಿತಾ ಹರೀಶ್ ರಾಮ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಪ್ರಭು, ಎಸ್. ಟಿ. ಮೋರ್ಚಾದ ಅಧ್ಯಕ್ಷೆ ಸುಮಾ ನಾಯ್ಕ್, ಹಿಂದುಳಿದ ವರ್ಗಗಳ ಮೋರ್ಚಾದ ಎಂ. ಲಕ್ಷ್ಮೀಶ ಬಂಗೇರ, ಅಲ್ಪಸಂಖ್ಯಾತ ಮೋರ್ಚಾದ ಡೆನೀಸ್ ಮಸ್ಕರೇನಸ್ ಉಪಸ್ಥಿತರಿದ್ದರು. ಶಾಸಕರ ಆಪ್ತ ಕಾರ್ಯದರ್ಶಿ ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿ, ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.