Sunday, March 2, 2025
Sunday, March 2, 2025

ಕಾರ್ಕಳ ಜ್ಞಾನಸುಧಾ: 76ನೇ ಗಣರಾಜ್ಯೋತ್ಸವ ಸಂಭ್ರಮ

ಕಾರ್ಕಳ ಜ್ಞಾನಸುಧಾ: 76ನೇ ಗಣರಾಜ್ಯೋತ್ಸವ ಸಂಭ್ರಮ

Date:

ಕಾರ್ಕಳ, ಜ.26: ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿ ಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತ ಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ.ಕೆ., ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫಾದ ಮಾಲಿಕ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!