Monday, January 27, 2025
Monday, January 27, 2025

ಲೋಕಹಿತಕ್ಕೆ ವಿಷ್ಣು ಸಹಸ್ರನಾಮ ಪರಿಣಾಮಕಾರಿ: ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್

ಲೋಕಹಿತಕ್ಕೆ ವಿಷ್ಣು ಸಹಸ್ರನಾಮ ಪರಿಣಾಮಕಾರಿ: ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್

Date:

ಕೋಟ, ಜ.26: ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪರಿಣಾಮಕಾರಿ ಎಂದು ಗೀತಾನಂದ ಫೌಂಡೇಶನ್ ವಿಶ್ವಸ್ಥರಾದ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಹೇಳಿದರು.

ಭಾನುವಾರ ಕೋಟ ಮಣೂರು ಪಡುಕರೆ ಸಮುದ್ರ ತಟದಲ್ಲಿ ಪ್ರಸ್ತುತ ದಿನಗಳಲ್ಲಿ ಪ್ರಾಕೃತಿಕ ಅಸಮತೋಲನ ನಿವಾರಿಸುವ ಅಥವಾ ಸುನಾಮಿ ಸೇರಿದಂತೆ ವಿವಿಧ ತರಹದ ಪ್ರಕೃತಿ ಹಾನಿ ತಪ್ಪಿಸುವ ಉದ್ದೇಶದಿಂದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇಗುಲ ಹಮ್ಮಿಕೊಂಡ ಕಾಸರಗೋಡಿನ ಕಣ್ಣೂರಿನಿಂದ ಬೈಂದೂರಿನ ಶಿರೂರು ಕಡಲ ಕಿನಾರೆಯವರೆಗೆ ವಿವಿಧ ಭಾಗಗಳ ನೂರ ಎಂಟು ವ್ಯಾಪ್ತಿಯಲ್ಲಿ‌ ನೂರ ಎಂಟು ಜನಸಮುದಾಯದಿಂದ ವಿಷ್ಣು ಸಹಸ್ರನಾಮ ಪಠಣ ಕಾರ್ಯಕ್ರಮ ಕೋಟದ ಪಂಚವರ್ಣ ಸಂಘಟನೆ, ಸ್ನೇಹಕೂಟ ಮಣೂರು, ಕೇಶವ ಶಿಶು ಮಂದಿರ ಮೂಡುಗಿಳಿಯಾರು, ಹಂದಟ್ಟು ಮಹಿಳಾ ಬಳಗ ಸಂಯೋಜನೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮುದ್ರ ತಟದಲ್ಲಿ ಕೇಶವ ಶಿಶುಮಂದಿರದ ಅಧ್ಯಕ್ಷ ಕೃಷ್ಣ ಹಂದೆ ಅರಸಿನ ಕುಂಕುಮ ಹಾಗೂ ಹಾಲು ಎರೆದು ಮಂತ್ರ ಪಠಿಸಿ ಸಮುದ್ರ ಪೂಜೆ ನೆರವೇರಿಸಿದರು. ಒಟ್ಟು ಆರು ಬಾರಿ ವಿಷ್ಣು ಸಹಸ್ರನಾಮವನ್ನು ಇನ್ನೂರಕ್ಕೂ ಅಧಿಕ ಮಂದಿ ಸಮುದ್ರ ತಟ್ಟದಲ್ಲಿ ಕುಳಿತು ಪಠಿಸಿದರು. ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ.ಮಯ್ಯ, ಮಾರ್ಗದರ್ಶಕರಾದ ವಿಷ್ಣುಮೂರ್ತಿ ಮಯ್ಯ, ಕೋಟ ಪಂಚಾಯತ್ ಸದಸ್ಯರಾದ ಪ್ರದೀಪ್ ಸಾಲಿಯಾನ್, ಶೇಖರ್ ಗಿಳಿಯಾರು, ಕೇಶವ ಶಿಶುಮಂದಿದ ಮಾತಾಜಿ ಗಿರಿಜಾ ಪೂಜಾರಿ, ಸಾಮಾಜಿಕ ಕಾರ್ಯಕರ್ತ ದಿನೇಶ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಭಜನಾ ಮಂಡಳಿಯ ಸಂಚಾಲಕಿ ಗೀತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ರತ್ನಾ ಪೂಜಾರಿ, ಸ್ಥಾಪಕಾಧ್ಯಕ್ಷೆ ಪುಷ್ಭಾ ಹಂದಟ್ಟು, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ರವೀಂದ್ರ ಕೋಟ ನಿರೂಪಿಸಿದರು.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!