ಉಡುಪಿ, ಜ.26: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು. ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ .ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.
ರೋಗ ಬಂದ ನಂತರ ಯೋಚನೆ ಮಾಡುವ ಬದಲು ರೋಗ ಬರದಂತೆ ಆರೋಗ್ಯ ರಕ್ಷಣೆ ಮಾಡಬೇಕು, ಈ ನಿಟ್ಟಿನಲ್ಲಿ ಈ ರೀತಿಯ ಶಿಬಿರಗಳು ನೆರವಾಗಲು ಸಾಧ್ಯ ಎಂದು ಪುತ್ತಿಗೆ ಶ್ರೀಗಳು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಿಕಾಂತ್ ಬೆಸ್ಕೂರು, ಐಎಮ್ಎ ಅಧ್ಯಕ್ಷ ಡಾ. ಸುರೇಶ್ ಶೆಣ್ಮ್, ರಾಜೇಶ್ ಕುಮಾರ್, ಲಯನ್ಸ್ ಪದಾಧಿಕಾರಿಗಳು ವೈದ್ಯರು ಉಪಸ್ಥಿತರಿದ್ದರು. ರತ್ನಾಕರ್ ಇಂದ್ರಾಳಿ ನಿರೂಪಿಸಿದರು.