Thursday, October 1, 2026
Thursday, October 1, 2026

ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು: ಯಶ್ಪಾಲ್ ಸುವರ್ಣ

ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು: ಯಶ್ಪಾಲ್ ಸುವರ್ಣ

Date:

ಉಡುಪಿ, ಜ.27: ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯಿಂದ ಟ್ರಾಫಿಕ್ ನಿಯಂತ್ರಣ ಮಾಡಲು ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿದ್ದು, ಭಾನುವಾರ ಸಂಜೆಯಿಂದಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಡಿಸೆಂಬರ್ ತಿಂಗಳ ಕೊನೆಯ ವಾರದಿಂದ ಉಡುಪಿಯಲ್ಲಿ ಭಾರೀ ವಾಹನ ದಟ್ಟಣೆಯಿಂದ ಕಲ್ಸಂಕ ಭಾಗದಲ್ಲಿ ಅಂಬಾಗಿಲು ಗುಂಡಿಬೈಲು ಭಾಗದ ವಾಹನಗಳು ಕಡಿಯಾಳಿ ಭಾಗಕ್ಕೆ ಹಾಗೂ ಮಣಿಪಾಲ ಭಾಗದ ವಾಹನಗಳು ಸಿಟಿ ಬಸ್ ನಿಲ್ದಾಣದಲ್ಲಿ ಸಾಗಿ ಬರುವಂತೆ ಮಾರ್ಪಾಡು ಮಾಡಿರುವ ಬಗ್ಗೆ ಸಾರ್ವಜನಿಕರು ಬ್ಯಾರಿಕೇಡ್ ತೆರವು ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಚರ್ಚೆ ನಡೆಸಿ ಬ್ಯಾರಿಕೇಡ್ ತೆರವಿಗೆ ಕ್ರಮ ವಹಿಸಲಾಗಿದೆ.

ಸರಣಿ ರಜೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರ ದಟ್ಟಣೆ ಉಂಟಾದ ಸಂದರ್ಭದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ನಗರಸಭೆಯ ಅನುದಾನದಿಂದ ಶೀಘ್ರದಲ್ಲಿ ಕಲ್ಸಂಕದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!