Thursday, October 1, 2026
Thursday, October 1, 2026

ವಡಭಾಂಡೇಶ್ವರ: 50 ಲಕ್ಷ ವೆಚ್ಚದಲ್ಲಿ ಮೀನುಗಾರಿಕೆ ರಸ್ತೆ ಅಭಿವದ್ಧಿ ಕಾಮಗಾರಿಗೆ ಚಾಲನೆ

ವಡಭಾಂಡೇಶ್ವರ: 50 ಲಕ್ಷ ವೆಚ್ಚದಲ್ಲಿ ಮೀನುಗಾರಿಕೆ ರಸ್ತೆ ಅಭಿವದ್ಧಿ ಕಾಮಗಾರಿಗೆ ಚಾಲನೆ

Date:

ಉಡುಪಿ, ಜ.27: ವಡಭಾಂಡೇಶ್ವರ ವ್ಯಾಪ್ತಿಯಲ್ಲಿ 50 ಲಕ್ಷ ವೆಚ್ಚದಲ್ಲಿ ನಡೆಯಲಿರುವ ತೊಟ್ಟಂ ಮೀನುಗಾರಿಕಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಮೀನುಗಾರಿಕಾ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಮೀನುಗಾರಿಕಾ ಸಚಿವರಿಗೆ ತುರ್ತು ಅನುದಾನಕ್ಕೆ ಮನವಿ ಸಲ್ಲಿಸಿದ್ದು, ಇದರ ಭಾಗವಾಗಿ ಮೀನುಗಾರಿಕಾ ಇಲಾಖೆಯ ಮೂಲಕ ತೊಟ್ಟಂ ರಸ್ತೆಯ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು ಇತರ ರಸ್ತೆಗಳ ಅಭಿವೃದ್ಧಿಗೂ ಕ್ರಮ ವಹಿಸುವುದಾಗಿ ತಿಳಿಸಿದರು.

ವಡಭಾಂಡೇಶ್ವರ ವಾರ್ಡಿನ ನಗರಸಭಾ ಸದಸ್ಯರಾದ ಯೋಗೀಶ್ ಸಾಲ್ಯಾನ್, ಪಂಡರೀನಾಥ ಭಕ್ತಿ ಉದಯ ಭಜನಾ ಮಂದಿರದ ಅಧ್ಯಕ್ಷ ವಿಲಾಸ್ ಸುವರ್ಣ, ಗೌರವಾಧ್ಯಕ್ಷ ಯತಿರಾಜ್ ಸಾಲ್ಯಾನ್, ಉಪಾಧ್ಯಕ್ಷ ಶೇಖರ್ ಟಿ. ಸಾಲ್ಯಾನ್, 2ನೇ ತೊಟ್ಟಂ ಮೊಗವೀರ ಗ್ರಾಮ ಸಭೆಯ ಗುರಿಕಾರ ಈಶ್ವರ ಜಿ. ಸಾಲ್ಯಾನ್, ತೆಂಕ ತೊಟ್ಟಂ ಮಹಿಳಾ ಮಂಡಳಿಯ ಅಧ್ಯಕ್ಷೆ ವನಜಾ ಜೆ. ಪುತ್ರನ್, ಭಜನಾ ಮಂದಿರದ ಮಾತೃ ಮಂಡಳಿಯ ಅಧ್ಯಕ್ಷೆ ದಶಾ ಮಹಾಬಲ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಸ್.ಆರ್.ಟಿ.ಸಿ: ಅ. 11 -20- ಉಡುಪಿಯಿಂದ ನವರಾತ್ರಿ ವಿಶೇಷ ಪ್ಯಾಕೇಜ್ ಪ್ರವಾಸ

ಉಡುಪಿ, ಸೆ.30: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಉಡುಪಿ ಘಟಕದಿಂದ...

ʼಕಬ್ಬದುಳುಮೆʼ ಕಾವ್ಯಲೋಕದ ಓದಿನ ಹೊಸಪರಿ

ಹಿರಿಯಡಕ, ಸೆ.30: ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ...

ಕೋಟೇಶ್ವರ: ವಿದ್ಯಾರ್ಥಿ ಸಂಘ ಉದ್ಘಾಟನೆ

ಕೋಟೇಶ್ವರ, ಸೆ.30: ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಕಾಲೇಜು ಹಂತದಲ್ಲಿ ವಿದ್ಯಾರ್ಥಿ...

ಹಿರಿಯ ನಾಗರಿಕರು ಹಿಂಜರಿಕೆಯಿಲ್ಲದೆ ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿ: ನ್ಯಾ. ನಿತಿನ್ ಯಶ್ವಂತ್ ರಾವ್

ಉಡುಪಿ, ಸೆ.30: ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ...
error: Content is protected !!