Tuesday, October 20, 2026
Tuesday, October 20, 2026

ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ನ್ಯಾ. ಯೋಗೀಶ್ ಪಿ.ಆರ್

ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ನ್ಯಾ. ಯೋಗೀಶ್ ಪಿ.ಆರ್

Date:

ಉಡುಪಿ, ಜ.28: ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದಾಗ ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್, ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ, ಪಿ.ಎನ್.ಡಿ.ಟಿ ಹಾಗೂ ತಾಯಿ ಆರೋಗ್ಯ ಕಾರ್ಯಕ್ರಮ ಉಡುಪಿ ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮಣಿಪಾಲ ಮಾಹೆ ಇವರ ಸಹಯೋಗದಲ್ಲಿ ಜಿಲ್ಲೆಯ ಸರಕಾರಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿಗಳಿಗೆ ಪೋಕ್ಸೋ ಕಾಯಿದೆ ಕುರಿತು ನಡೆದ ಕಾರ್ಯಾಗಾರವನ್ನು ದೀಪ ಬೆಳಗಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಹದಿನೆಂಟು ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪ್ರಾಪ್ತ ವಯಸ್ಸಿನವರೆಂದು ಪರಿಗಣಿಸಲಾಗುತ್ತದೆ. ಇಂಥ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದು ಅಕ್ಷಮ್ಯ ಅಪರಾಧವಾಗುತ್ತದೆ. ಪೋಕ್ಸೋ ಕಾಯ್ದೆಯಡಿ ಯಾವುದೇ ವ್ಯಕ್ತಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಾಬೀತಾದಲ್ಲಿ ಅಂತಹವರ ಮೇಲೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು. ದೇಶದ ಪ್ರತಿಯೊಬ್ಬರೂ ಈ ನೆಲದ ಕಾನೂನನ್ನು ಗೌರವಿಸಬೇಕು. ನಾವು ಕಾನೂನು ರಕ್ಷಣೆ ಮಾಡಿದರೆ ಕಾನೂನು ನಮ್ಮನ್ನು ರಕ್ಷಣೆ ಮಾಡುತ್ತದೆ. ಕಾನೂನಿನ ಬಗ್ಗೆ ಅರಿವು ಹೊಂದಿಲ್ಲದೇ ಇದ್ದಾಗ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಛಾಗುವ ಸಾಧ್ಯತೆ ಇದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ನಾಗರತ್ನ ಶಾಸ್ತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಹೊಂದಿ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಮಾತ್ರ ದೌಜ್ಯನ್ಯಕ್ಕೆ ಒಳಗಾದ ಅಪ್ರಾಪ್ತರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದರು. ಕೆ.ಎಂ.ಸಿ ಮಣಿಪಾಲದ ಪ್ರಸೂತಿ ತಜ್ಞೆ ಡಾ. ರಾಜೇಶ್ವರಿ, ಕೆ.ಎಂ.ಸಿ ಮಣಿಪಾಲದ ಫೋರೆನ್ಸಿಕ್ ತಜ್ಞೆ ಡಾ. ಅಪರ್ಣ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್, ಬಿ.ಕೆ, ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ತ ಅಶ್ವಿನ್ ಕುಮಾರ್, ಜಿಲ್ಲೆಯ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸ್ನ ಸ್ವಾಗತಿಸಿ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್ ಕೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!