Saturday, February 7, 2026
Saturday, February 7, 2026

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Date:

ಉಡುಪಿ, ಜ.28: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹದಿಹರೆಯದ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಹಾಗೂ ಆಪ್ತ ಸಮಾಲೋಚನೆ ಕುರಿತು ಅರಿವು ಕಾರ್ಯಕ್ರಮ, ಪ್ರತಿಜ್ಞಾವಿಧಿ ಸ್ವೀಕಾರ ಮತ್ತು ಹೆಣ್ಣು ಮಗುವಿನ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮವು ನಗರದ ಉದ್ಯಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್ ಕುಂದರ್ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ ಮಾತನಾಡಿ, ಮಕ್ಕಳ ರಕ್ಷಣೆಗಾಗಿಯೇ ಹಕ್ಕುಗಳು ಹಾಗೂ ಕಾಯ್ದೆಗಳು ಇವೆ. ಹದಿಹರೆಯದ ವಯಸ್ಸಿಗೆ ಅಗತ್ಯವಾದ ಪೂರಕ ಮಾಹಿತಿ ನೀಡುವ ಈ ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೋಳಾರುಗುಡ್ಡೆ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮೂಕಾಂಬೆ ಪ್ರತಿಯೊಬ್ಬರಿಗೂ ಸಮಾನ ಅವಕಾಶ ನೀಡುವ ಉದ್ದೇಶದಿಂದ ಪ್ರಾರಂಭವಾದ ಈ ಕಾರ್ಯಕ್ರಮವನ್ನು ತಮ್ಮ ಶಾಲೆಯಲ್ಲಿ ಹಮ್ಮಿಕೊಂಡದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗಿರೀಶ್ ಎಂ.ಎನ್ ವಿಧ್ಯಾರ್ಥಿಗಳಿಗೆ ಹದಿಹರೆಯದ ವಯಸ್ಸಿನ ಮಾನಸಿಕ ಆರೋಗ್ಯ ಮತ್ತು ಆಪ್ತ ಸಮಾಲೋಚನೆ, ಅಂತರ್ಜಾಲದ ದುಷ್ಪರಿಣಾಮ ವಿಷಯಗಳ ಕುರಿತು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೀಪಾ ನಿರೂಪಿಸಿ, ಶಾರದಾ ವೈ ವಂದಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು, ಬೋಳಾರುಗುಡ್ಡೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!