Monday, September 7, 2026
Monday, September 7, 2026

ಈಶ್ವರ್ ಮಲ್ಪೆ ತಂಡದ ಕಾರ್ಯ ಶ್ಲಾಘನೀಯ

ಈಶ್ವರ್ ಮಲ್ಪೆ ತಂಡದ ಕಾರ್ಯ ಶ್ಲಾಘನೀಯ

Date:

ಕೋಟ, ಜ.28: ಸಮಾಜದ ಬಗ್ಗೆ ಸದಾ ತುಡಿತ ಹೊಂದಿದ ಈಶ್ವರ್ ಮಲ್ಪೆ ತಂಡದ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನೀಯ. ಸ್ಥಳೀಯವಾಗಿ ಹಲವು ಜನಪರ ಕಾರ್ಯಕ್ರಮಗಳಿಂದ ಪಂಚವರ್ಣ ಸಂಸ್ಥೆ ಎಲ್ಲರಿಗೂ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಳ್ ಹೇಳಿದರು. ಮಂಗಳವಾರ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಜೀವರಕ್ಷಕ ಟೀಮ್ ಈಶ್ವರ್ ಮಲ್ಪೆ ಇವರ ಆಶ್ರಯದಲ್ಲಿ ನಡೆದ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಜೀವನ್ ಮಿತ್ರ ಸೇವಾ ಟ್ರಸ್ಟ್ ಮುಖ್ಯಸ್ಥ ನಾಗರಾಜ್ ಪುತ್ರನ್, ಟೀಮ್ ಈಶ್ವರ್ ಮಲ್ಪೆ ತಂಡದ ಲವ ಬಂಗೇರ, ವಿಘ್ನಹರ್ತ ಕ್ಲಿನಿಕ್ ಉಡುಪಿ ಇದರ ವೈದ್ಯೆ ಡಾ.ಅಂಕಿತಾ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ನಿಯೋಜಿತ ಅಧ್ಯಕ್ಷ ಮನೋಹರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು. ಉಪಾಧ್ಯಕ್ಷ ದಿನೇಶ್ ಆಚಾರ್ ಸಹರಿಸಿದರು. ಕೋಟ ಅಮೃತೇಶ್ವರಿ ದೇಗುಲ ಸಹಕಾರ ನೀಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!