Tuesday, September 29, 2026
Tuesday, September 29, 2026

ಜ.31: ಯಶ್ಪಾಲ್ ಸುವರ್ಣ ನೇತೃತ್ವದ ಪುಷ್ಪಾನಂದ ಫೌಂಡೇಶನ್ ಮನೆ ಹಸ್ತಾಂತರ

ಜ.31: ಯಶ್ಪಾಲ್ ಸುವರ್ಣ ನೇತೃತ್ವದ ಪುಷ್ಪಾನಂದ ಫೌಂಡೇಶನ್ ಮನೆ ಹಸ್ತಾಂತರ

Date:

ಮಲ್ಪೆ, ಜ.29: ಮಲ್ಪೆ ವಡಭಾಂಡೇಶ್ವರ ವಾರ್ಡಿನ ಅರ್ಹ ಬಡ ಕುಟುಂಬಕ್ಕೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ‘ಪುಷ್ಪಾನಂದ’ ಮನೆಯನ್ನು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜನವರಿ 31 ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಹಸ್ತಾಂತರಿಸಲಿದ್ದಾರೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಶುಭ ಸಂದರ್ಭದಲ್ಲಿ ಪೇಜಾವರ ಶ್ರೀಗಳ ರಾಮ ರಾಜ್ಯ ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಆಶಯದಂತೆ ಶ್ರೀಗಳ ಮಾರ್ಗದರ್ಶನದಲ್ಲಿ ಹೆತ್ತವರ ಸ್ಮರಣಾರ್ಥವಾಗಿ ಶ್ರೀರಾಮ ನವಮಿಯಂದು ಮನೆಗೆ ಶಿಲಾನ್ಯಾಸ ನೆರವೇರಿಸಿದ್ದು ಇದೀಗ ನೂತನ ಮನೆಯನ್ನು ಪೇಜಾವರ ಶ್ರೀಗಳೇ ಹಸ್ತಾಂತರಿಸಲಿದ್ದಾರೆ.

ಪುಷ್ಪಾನಂದ ಫೌಂಡೇಶನ್ ಮೂಲಕ ಶಿಕ್ಷಣ, ಸಾಮಾಜಿಕ, ಆರೋಗ್ಯ, ಧಾರ್ಮಿಕ ಕ್ಷೇತ್ರದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಡ ಕುಟುಂಬಗಳಿಗೆ ಶಕ್ತಿ ತುಂಬುವ ಕೆಲಸ ನಿರಂತರವಾಗಿ ನಡೆಸುವ ಮೂಲಕ ಹೆತ್ತವರ ಹೆಸರನ್ನು ಚಿರಸ್ಥಾಯಿಯಾಗಿಸುವ ಸಂಕಲ್ಪ ಸಾಕಾರಗೊಳಿಸುವ ಯೋಜನೆಯಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!