Wednesday, September 30, 2026
Wednesday, September 30, 2026

ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನದ ಸಂಕಲ್ಪ ಮಾಡೋಣ: ಯಶ್ಪಾಲ್ ಸುವರ್ಣ

ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನದ ಸಂಕಲ್ಪ ಮಾಡೋಣ: ಯಶ್ಪಾಲ್ ಸುವರ್ಣ

Date:

ಉಡುಪಿ, ಜ.29: ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ಹಾಗೂ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಅಂತಿಮ ಪರೀಕ್ಷೆಯ ಬಗ್ಗೆ ಆಯೋಜಿಸಿದ್ದ ಪೂರ್ವಸಿದ್ದತಾ ಸಭೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಅವರು ಮಾತನಾಡುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ತರ ಘಟ್ಟವಾದ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಶಿಕ್ಷಕರು ವಿಶೇಷ ಮುತುವರ್ಜಿ ವಹಿಸಿ, ಮತ್ತೊಮ್ಮೆ ಉಡುಪಿ ಜಿಲ್ಲೆ ಮುಂಬರುವ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬರಲು ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂಕಲ್ಪ ಮಾಡುವಂತೆ ಕರೆ ನೀಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಶಿಕ್ಷಣ ಹಾಗೂ ಆರೋಗ್ಯ ವಿಚಾರಕ್ಕೆ ವಿಶೇಷ ಆದ್ಯತೆ ನೀಡುತ್ತಾ ಬಂದಿರುವ ಶಾಸಕ ಯಶ್ಪಾಲ್ ಸುವರ್ಣ ರವರು ನಿರಂತರವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಸಹಕಾರ ನೀಡುತ್ತಿದ್ದು, ಮತ್ತೂಮ್ಮೆ ಉತ್ತಮ ಫಲಿತಾಂಶಕ್ಕಾಗಿ ಜಿಲ್ಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಕೈಜೋಡಿಸಲಿದ್ದಾರೆ ಎಂದರು.

ಸಂಪನ್ಮೂಲ ವ್ಯಕ್ತಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಸುಕನ್ಯ ಮೇರಿ, ದೇಶದ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳ ಜೀವನ ರೂಪಿಸುವ ಮಹತ್ವದ ಹೊಣೆ ಶಿಕ್ಷಕರದ್ದಾಗಿದ್ದು, ಕರಾವಳಿ ಜಿಲ್ಲೆಯ ಶಿಕ್ಷಕರ ಬದ್ಧತೆ ಪ್ರಾಮಾಣಿಕ ಸೇವೆಯಿಂದ ಜಿಲ್ಲೆಯ ಶೈಕ್ಷಣಿಕ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದರು.

ಸಭೆಯಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಶಬಾನಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಇಂದಿರಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ನವ್ಯ ನಾಯಕ್, ನಿವೃತ್ತ ಪ್ರಾಂಶುಪಾಲರಾದ ತಾರಾ ದೇವಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರಾದ ಗಂಗಾಧರ ವಿ. ಎ. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!