Sunday, February 2, 2025
Sunday, February 2, 2025

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

Date:

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆ ಹಾಗೂ ತಮ್ಮ ಮಿತ್ರ ಪಕ್ಷ ಜೆಡಿಯುಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಹೊರತು ದೇಶದಲ್ಲಿ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಬಜೆಟ್ ನಲ್ಲಿ ಯಾವುದೇ ರೀತಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು, ಆದರೆ ಇಲ್ಲಿನ ಸಂಸದರು ವಿತ್ತ ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದು ಈ ಬಜೆಟ್ ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್ ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ.ಇದೊಂದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ ಎಂದು ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಅವಧಿ ಮುಗಿದಿರುವ ಬ್ಯಾನರ್ /ಕಟೌಟ್‌ಗಳ ತೆರವಿಗೆ ಸೂಚನೆ

ಉಡುಪಿ, ಫೆ.1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ...

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯ ವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ...

ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೂ ಅಸಾಧ್ಯವಲ್ಲ: ಗೌತಮ್ ನಾವಡ

ಬಂಟಕಲ್, ಫೆ.1: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ...
error: Content is protected !!