ಕುಕ್ಕೆಹಳ್ಳಿ, ಫೆ.2: ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಇಲ್ಲಿವಿಜ್ಞಾನ ಶಿಕ್ಷಕರಾದ ಅನುಷಾ. ಎಸ್. ಶೆಟ್ಟಿ ಇವರ ಮುಂದಾಳತ್ವದಲ್ಲಿ ಮಕ್ಕಳ ಸಂತೆ ನಡೆಯಿತು. ವಿದ್ಯಾರ್ಥಿಗಳಿಗೆ ಅವರ ಸಾಮಾನ್ಯ ಜ್ಞಾನವನ್ನು ಮತ್ತು ವ್ಯವಹಾರ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಅವರ ಅಭಿವೃದ್ದಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಮಕ್ಕಳ ಸಂತೆಯನ್ನು ಆಯೋಜಿಸಲಾಯಿತು. ಮಕ್ಕಳು ತರಕಾರಿ, ಹಣ್ಣು ಹಂಪಲು, ಸಾಂಬಾರು ಪದಾರ್ಥ, ಹೂವು ಹಾಗೂ ಇತರ ಸಾಮಾನುಗಳನ್ನು ತಂದು ಸಂತೆಯಲ್ಲಿ ಮಾರಾಟ ಮಾಡಿದರು. ಮಕ್ಕಳ ಪೋಷಕರು ಗ್ರಾಹಕರಾಗಿ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕರಾದ ಸರಸ್ವತಿ ಹಾಗೂ ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಹಾಜರಿದ್ದರು. ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಸುಕೇಶ್ ಮಡಿವಾಳ, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ಕೊಳಲಗಿರಿ ಹಾಗೂ ಎಸ್.ಡಿ.ಎಂ.ಸಿ ಸಮನ್ವಯ ಸಮಿತಿ ಬ್ರಹ್ಮಾವರ ಇದರ ಅಧ್ಯಕ್ಷರಾದ ವಿಶ್ವನಾಥ್ ಬೆಳ್ಳಂಪಳ್ಳಿ ಹಾಗೂ ಶಾಲಾಭಿವೃದ್ದಿ ಸಮಿತಿಯ ಸರ್ವ ಸದಸ್ಯರು ಪಾಲ್ಗೊಂಡರು.
ಹೀಗೊಂದು ಮಕ್ಕಳ ಸಂತೆ
ಹೀಗೊಂದು ಮಕ್ಕಳ ಸಂತೆ
Date: