Wednesday, February 5, 2025
Wednesday, February 5, 2025

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಗೆ ಸದಸ್ಯರಾಗಲು ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಗೆ ಸದಸ್ಯರಾಗಲು ಅರ್ಜಿ ಆಹ್ವಾನ

Date:

ಉಡುಪಿ, ಫೆ.4: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಖರಣ ಇಲಾಖೆಯ ವತಿಯಿಂದ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ- 2007 ಮತ್ತು ಅಧಿನಿಯಮ- 2009 ರನ್ವಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕಾಗಿರುತ್ತದೆ. ಈ ಸಭೆಗೆ ಪದಾಧಿಕಾರಿಗಳ ಆಯ್ಕೆಯಲ್ಲಿ ಇಬ್ಬರು ಹಿರಿಯ ನಾಗರಿಕರನ್ನು ನಾಮನಿರ್ದೇಶನ ಮಾಡಲು ಅರ್ಹ ಹಿರಿಯ ನಾಗರಿಕರಿಂದ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಇಬ್ಬರು ಸ್ವಯಂಸೇವಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಆಸಕ್ತ ಸ್ವಯಂಸೇವಾ ಪ್ರತಿನಿಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್ ಡಿ.ಸಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯೋಗದಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ: ಪುತ್ತಿಗೆ ಶ್ರೀ

ಉಡುಪಿ, ಫೆ.4: ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಸಾಧ್ಯ ಎಂದು...

ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ದ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಫೆ.4: ಮಂಗಳವಾರ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ...

ಮಣಿಪಾಲ: ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ ಅನಾವರಣ

ಮಣಿಪಾಲ, ಫೆ.4: ವಿಶ್ವ ಕ್ಯಾನ್ಸರ್ ದಿನ-2025 ಕ್ಯಾನ್ಸರ್ ಜಾಗೃತಿ 3ಡಿ ಕಲಾಕೃತಿ...

ಕಾಪು: ಆರೋಗ್ಯ ಇಲಾಖೆಗೆ ಜಾಗವನ್ನು ದಾನ ಮಾಡಿದ ಗಣೇಶ್ ಬೋಜ ಕರ್ಕೇರ

ಕಾಪು, ಫೆ.4: ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ವ್ಯಾಪ್ತಿಯ 92 ಹೇರೂರು...
error: Content is protected !!