ಕಾಪು, ಫೆ.5: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಲುವಾಗಿ ದೇವಳದಲ್ಲಿ ನವಚಂಡೀ ಯಾಗ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ್ ಶೆಟ್ಟಿ, ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಹೆಗ್ಡೆ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ನಿ) ಮಂಗಳೂರು ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ(ನಿ) ಬೆಂಗಳೂರು ಅಧ್ಯಕ್ಷರಾದ ಎಂ ಎನ್ ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದ್ಯಸರಾದ ಡಾ. ಮಂಜುನಾಥ್ ಭಂಡಾರಿ, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.