Sunday, July 26, 2026
Sunday, July 26, 2026

ಫೆ. 8: ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ರೂ. 25ಲಕ್ಷ ಪ್ರತಿಭಾ ಪುರಸ್ಕಾರ: ಯಶ್ಪಾಲ್ ಸುವರ್ಣ

ಫೆ. 8: ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ರೂ. 25ಲಕ್ಷ ಪ್ರತಿಭಾ ಪುರಸ್ಕಾರ: ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.6: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್. ಎಸ್. ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ರೂ. 25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆಬ್ರವರಿ 8 ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಕರಾವಳಿ ಕಾವಲು ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಎಚ್. ನೆರವೇರಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಸಿ. ಬಂಗೇರ, ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ನಿಕೇತನ ರವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ 15 ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!