ಕೋಟ, ಫೆ.10: ಕೃಷಿ ಕಾಯಕ ಕಡೆಗಣಿಸುವ ಮನಸ್ಥಿತಿಯಿಂದ ಹೊರಬರಬೇಕು ತನ್ಮೂಲಕ ಯುವ ಸಮುದಾಯ ಕೃಷಿಯಲ್ಲಿ ತೊಡಗಿಕೊಳ್ಳುವಂತಾಗಬೇಕು ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ಚನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಜಂಟಿ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 43ನೇ ಸರಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಿಡ ನೆಟ್ಟು, ಗೋ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಿರಿಯ ಕೃಷಿಕ ಬಾಬು ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪ್ರಮುಖರಾದ ತಿಮ್ಮ ಕಾಂಚನ್, ಉದ್ಯಮಿ ಹರೀಶ್ ದೇವಾಡಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮುಂತಾದವರಿದ್ದರು. ಪಂಚವರ್ಣ ಗೌರವ ಸಲಹೆಗಾರ ಟಿ.ಮಂಜುನಾಥ ಗಿಳಿಯಾರು ಸನ್ಮಾನಿತರನ್ನು ಪರಿಚಯಿಸಿದರು. ಸನ್ಮಾನ ಪತ್ರವನ್ನು ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಯಾಚಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಸಂಯೋಜಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು.