ಉಡುಪಿ, ಫೆ.10: 110/11ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್‌ಬಾರ್ ಶಕ್ತಿ ಪರಿವರ್ತಕಗಳ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಇಲಾಖೆಯಿಂದ ಫೆಬ್ರವರಿ 11 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಬಜೆ ರೇಚಕ ಸ್ಥಾವರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ, ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ: ಫೆ. 11 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಫೆ. 11 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
Date: