Monday, February 24, 2025
Monday, February 24, 2025

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಯಶ್ಪಾಲ್ ಸುವರ್ಣ

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಯಶ್ಪಾಲ್ ಸುವರ್ಣ

Date:

ಬ್ರಹ್ಮಾವರ, ಫೆ.10: ಉಡುಪಿ ಗ್ರಾಮಾಂತರ ಭಾಗದ ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಕರ್ಜೆ ಗ್ರಾಮದ ಅಪ್ರಿಕಟ್ಟೆ ಸೇತುವೆಯಿಂದ ಹೊಸೂರು ಶಾಲೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್. ಎಚ್. ಡಿ. ಪಿ. ಯೋಜನೆಯಡಿ ರೂ.10 ಕೋಟಿ ಅನುದಾನದ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಉಡುಪಿ ಕ್ಷೇತ್ರದ ಗಡಿಭಾಗ ಕಳ್ತೂರು ವರೆಗೂ ಚತುಷ್ಪಥ ರಸ್ತೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ್ ಕುಲಾಲ್, ಪ್ರಮುಖರಾದ ಸುರೇಶ್ ಶೆಟ್ಟಿ ತಡಾಲ್, ಧನಂಜಯ ಅಮೀನ್, ರಮೇಶ್ ಭಟ್ ಕರ್ಜೆ, ಪ್ರತಾಪ್ ಹೆಗ್ಡೆ ಮಾರಾಳಿ, ರಾಜೇಶ್ ಶೆಟ್ಟಿ ಬಿರ್ತಿ, ಆದರ್ಶ ಶೆಟ್ಟಿ ಕೆಂಜೂರು, ನರಸಿಂಹ ನಾಯ್ಕ್, ದಿನೇಶ್ ಕೆಂಜೂರು, ಹರೀಶ್ ಶೆಟ್ಟಿ ಚೇರ್ಕಾಡಿ, ಕಮಲಾಕ್ಷ ಹೆಬ್ಬಾರ್, ಮನೋಜ್ ಶೆಟ್ಟಿ ಸಂತೆಕಟ್ಟೆ, ಕಿಟ್ಟಪ್ಪ ಅಮೀನ್, ನವೀನ್ ಪುತ್ರನ್ ಕರ್ಜೆ, ಕಳ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನವೀನ್ ಪೂಜಾರಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ, ಗುತ್ತಿಗೆದಾರರಾದ ದೇವಿಪ್ರಸಾದ್ ಶೆಟ್ಟಿ, ಸ್ಥಳೀಯರಾದ ಸುಧಾ ಭಟ್, ಕೃಷ್ಣ ಪೂಜಾರಿ, ಬಾಲಕೃಷ್ಣ ಪೂಜಾರಿ, ಅಮಿತ ಶೆಟ್ಟಿ, ಸುಧಾಕರ ಸುವರ್ಣ, ಸತೀಶ್ ನಾಯಕ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!