ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ “ಮಾತಾಡ್ ಮಾತಾಡ್ ಕನ್ನಡ” ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆಯ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ ಮಾಡಲಾಗಿದ್ದು ಇಂದು ಭತ್ತದ ಪೈರಿನ ಕಟಾವಿನ ಸಂದರ್ಭದಲ್ಲಿ ಕನ್ನಡ ಗೀತೆಗಳನ್ನು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಉಪನ್ಯಾಸಕರು, ಕೇದಾರೋತ್ಥಾನ ಟ್ರಸ್ಟಿನ ಪದಾಧಿಕಾರಿಗಳು ಹಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ಕೇದಾರೋತ್ಥಾನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕರಂಬಳ್ಳಿ, ಸ್ಥಳೀಯರಾದ ರಿಕೇಶ್ ಪಾಲನ್ ಅಂಬಲಪಾಡಿ ಶಿವಕುಮಾರ್, ವಿಜಯ ಭಟ್, ಸಾಮಾಜಿಕ ಕಾರ್ಯಕರ್ತರಾದ ಮಂಜುನಾಥ್ ಹೆಬ್ಬಾರ್, ಉಮೇಶ್ ಪೂಜಾರಿ, ವಿಕಾಸ್, ಅಕ್ಷಯ್, ಭಾರತ್ ಸ್ಕೌಟ್ ಎಂಡ್ ಗೈಡ್ಸ್ ನ ಸುಮನ್ ಶೇಖರ್, ಆನಂದ ಬಿ ಅಡಿಗ, ಮುಕುಂದ ಶಾಲೆಯ ಅಧ್ಯಾಪಕಿ ಸುಜಾತಾ ಶೆಟ್ಟಿ, ಮುಕುಂದ ಕೃಪಾ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ ಎಂಡ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.