ಮಣಿಪಾಲ, ಫೆ.11: ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಕೌಶಲ್ಯ ರೋಜ್ಗಾರ್ ಉದ್ಯೋಗ ಮೇಳದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮುಂತಾದವರು ಉಪಸ್ಥಿತರಿದ್ದರು.
ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ

ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ
Date: