ಮಣಿಪಾಲ, ಫೆ.12: ಮೈಸೂರಿನ ಉದಯಗಿರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘಟನೆಯ ಮುಂದುವರಿದ ಭಾಗವಾಗಿ ಫೆ10 ರ ರಾತ್ರಿ 8.30 ಕ್ಕೆ ಪೋಲಿಸ್ ಠಾಣೆಗೆ ನುಗ್ಗಿ ಪೋಲಿಸ್ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿ, 7 ಮಂದಿ ಪೋಲಿಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕಾನೂನು ಕೈಗೆತ್ತಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಉಡುಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಉಪಾಧ್ಯಕ್ಷರಾದ ಸಚಿನ್ ಪಿತ್ರೋಡಿ, ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮಣಿಪಾಲ, ನಗರ ಯುವಮೋರ್ಚಾ ಕಾರ್ಯದರ್ಶಿ ಧನುಷ್ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಭೂಷಣ್, ಅಜಿತ್ ಜೋಗಿ ಉಪಸ್ಥಿತರಿದ್ದರು.