Monday, February 24, 2025
Monday, February 24, 2025

ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ: ಮೀನುಗಾರರಿಂದ ಅರ್ಜಿ ಆಹ್ವಾನ

ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ: ಮೀನುಗಾರರಿಂದ ಅರ್ಜಿ ಆಹ್ವಾನ

Date:

ಉಡುಪಿ, ಫೆ.12: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲಾಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲಾಂಟ್/ ಕೋಲ್ಡ್ ಸ್ಟೋರೇಜ್ ನಿರ್ಮಾಣ ಹಾಗೂ ಮನರಂಜನಾ ಮಿನುಗಾರಿಕೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!