Tuesday, October 6, 2026
Tuesday, October 6, 2026

ಮಾದಕ ವಸ್ತುಗಳ ಜಾಗೃತಿ ಕಾರ್ಯಕ್ರಮ

ಮಾದಕ ವಸ್ತುಗಳ ಜಾಗೃತಿ ಕಾರ್ಯಕ್ರಮ

Date:

ಉಡುಪಿ, ಫೆ.14: ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ, ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ ರಾಮನಗರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಡಿ.ಡಿ ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿ ಪ್ರಧಾನ ಸಮಾರಂಭ ಹಿರಿಯಡ್ಕದ ವೀರಭದ್ರ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ದಿವ್ಯ ಸಾನಿಧ್ಯವನ್ನು ಉಡುಪಿಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಇವರು ವಹಿಸಿದ್ದರು. ಮಕ್ಕಳ ರಕ್ಷಣೆ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್ ಮಾಹಿತಿ ನೀಡಿದರು.

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಡಿ.ಡಿ. ಉಪಾಧ್ಯಾಯ ಸದ್ಭಾವನಾ ಪ್ರಥಮ ಪ್ರಶಸ್ತಿಗೆ ಭಾಜನರಾದ ಉಡುಪಿಯ ನಿವೃತ್ತ ಉಪನ್ಯಾಸಕ ಲಕ್ಷ್ಮಿ ಜನಾರ್ಧನ ಭಟ್ ಇವರಿಗೆ ಮಣಿಪಾಲ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಬಿ.ಇ.ಓ ಡಾ. ಯಲ್ಲಮ್ಮ, ಡಿ.ಡಿ. ಉಪಾಧ್ಯಾಯ ಆರೋಗ್ಯ ಕೇಂದ್ರದ ಕಾರ್ಯದರ್ಶಿ ಡಿ. ಸುಜಾತ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!