ಹಾಲಾಡಿ, ಫೆ.14: ಜೇಸಿಐ ಶಂಕರನಾರಾಯಣ ಇದರ ವತಿಯಿಂದ ವಿದ್ಯಾರ್ಥಿಗಳಿಗಾಗಿ ಉನ್ನತ ಶಿಕ್ಷಣ ಮತ್ತು ವ್ಯಕ್ತಿತ್ವ ವಿಕಸನ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಲಾಡಿಯ ಹೆಗ್ಗುಂಜೆ ರಾಜೀವ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ್ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಉಪನ್ಯಾಸ ನೀಡಿದರು. ಜೆಸಿಐ ಶಂಕರನಾರಾಯಣ ಅಧ್ಯಕ್ಷರಾದ ಪ್ರವೀಣ್ ಬಾಳೆಕೊಡ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಶಂಕರನಾರಾಯಣದ ಪೂರ್ವಾಧ್ಯಕ್ಷ ರಾಘವೇಂದ್ರ ಕುಪ್ಪಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ನಿರ್ದೇಶಕಿ ಪೂರ್ಣಿಮಾ ಉದಯ್ ರಾವ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಪದವಿಪೂರ್ವ ಕಾಲೇಜು ಹಾಲಾಡಿಯ ಉಪ ಪ್ರಾಂಶುಪಾಲರಾದ ಗಣಪತಿ ಹೆಗಡೆ, ಉಪನ್ಯಾಸಕರಾದ ಕುಮಾರ್ ಬೇರ್ಕಿ, ಚಂದ್ರಶೇಖರ್, ಮಾಲತಿ ಶೆಡ್ತಿ, ಶೃತಿ ಭಟ್ ಉಪಸ್ಥಿತರಿದ್ದರು. ಜೆಸಿಐ ಅಧ್ಯಕ್ಷ ಪ್ರವೀಣ್ ಬಾಳೆಕೊಡ್ಲು ಸ್ವಾಗತಿಸಿ, ಪೂರ್ವಾಧ್ಯಕ್ಷ ರಾಘವೇಂದ್ರ ಶೆಟ್ಟಿ ಹೆಬ್ಬಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಯೋಗೀಶ್ ದೇವಾಡಿಗ ವಂದಿಸಿದರು.