Monday, March 23, 2026
Monday, March 23, 2026

ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಅಡಚಣೆ ಉಂಟಾದಲ್ಲಿ ಸಹಾಯವಾಣಿ ಸಂಪರ್ಕಿಸಿ

ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ಅಡಚಣೆ ಉಂಟಾದಲ್ಲಿ ಸಹಾಯವಾಣಿ ಸಂಪರ್ಕಿಸಿ

Date:

ಉಡುಪಿ, ಫೆ.14: ಜಿಲ್ಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು / ಪಡೆಯಲು ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಅಡಚಣೆ ಉಂಟಾದಲ್ಲಿ ಈ ಕೆಳಕಂಡ ಜಿಲ್ಲಾಧಿಕಾರಿಯವರ ಕಛೇರಿ ಹಾಗೂ ತಹಶೀಲ್ದಾರರ ಕಛೇರಿಯ ಸಹಾಯವಾಣಿಯನ್ನು ಸಂರ್ಪಕಿಸಬಹುದಾಗಿದೆ. ಜಿಲ್ಲಾಧಿಕಾರಿ ಕಛೇರಿ ಸಹಾಯವಾಣಿ ಸಂಖ್ಯೆ: 0820-2574924, ತಹಶೀಲ್ದಾರರ ಕಛೇರಿಯ ಸಹಾಯವಾಣಿ ಸಂಖ್ಯೆಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201. ಬ್ರಹ್ಮಾವರ ದೂ.ಸಂಖ್ಯೆ: 0820-2560494, ಬೈಂದೂರು ದೂ.ಸಂಖ್ಯೆ: 08254-251657, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ದೂ.ಸಂಖ್ಯೆ :08258-230201 ಅನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಕೃತಿ ಸಾಂಸ್ಕೃತಿಕ ಉತ್ಸವ: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.23: ಕೆನರಾ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಕಳೆದ ವಾರ...

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...
error: Content is protected !!