Saturday, January 17, 2026
Saturday, January 17, 2026

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಫೆ.15: ಲೋಕಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಸಂಘಟಕರು ಆಯೋಜಿಸಿದ್ದಾರೆ. ಇದೊಂದು ಪುಣ್ಯದ ಕಾರ್ಯಕ್ರಮವಾಗಿದ್ದು ಈ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಿ ಎಂದು ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇಗುಲದ ಮುಖ್ಯಸ್ಥ ಸುಬ್ರಹ್ಮಣ್ಯ ಮಧ್ಯಸ್ಥ ಹೇಳಿದರು. ಶುಕ್ರವಾರ ಸಾಸ್ತಾನದ ಕಾರ್ತಿಕೇಯ ಎಸ್ಟೇಟ್ ಶ್ರೀನಿವಾಸ ಕಲ್ಯಾಣೋತ್ಸವ ಕಛೇರಿಯಲ್ಲಿ ಏಪ್ರಿಲ್ 1 ರಿಂದ 3ರವರೆಗೆ ನಡೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಆಮಂತ್ರಣ ಪತ್ರಿಕೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಗಣೇಶ್ ಭಟ್ ಬಿಡುಗಡೆಗೊಳಿಸಿದರು.

ಕಾರ್ತಿಕೇಯ ಎಸ್ಟೇಟ್ ಮಾಲಿಕರಾದ ಸುರೇಶ್ ಬೆಟ್ಟಿನ್, ಚಂದ್ರಶೇಖರ್ ಧನ್ಯ, ಅಘೋರೇಶ್ವರ ದೇಗುಲದ ಧರ್ಮದರ್ಶಿ ಚಂದ್ರಶೇಖರ್ ಕಾರಂತ್, ಗೋಳಿಗರಡಿ ದೈವಸ್ಥಾನದ ಅಧ್ಯಕ್ಷ ಜಿ.ವಿಠ್ಠಲ್ ಪೂಜಾರಿ ಪಾಂಡೇಶ್ವರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್ ಪಿ.ಕೆ., ಸಾಲಿಗ್ರಾಮ ದೇಗುಲದ ಟ್ರಸ್ಟಿ ಕೆ. ಅನಂತಪದ್ಮನಾಭ ಐತಾಳ್, ಸಮಿತಿಯ ಪ್ರಮುಖರಾದ ಲೀಲಾವತಿ ಗಂಗಾಧರ, ವೇ.ಮೂ ಪ್ರಸನ್ನ ತುಂಗ, ರಘು ಮಧ್ಯಸ್ಥ, ಸುಬ್ರಾಯ ಆಚಾರ್ ಮುಂತಾದವರು ಉಪಸ್ಥಿತರಿದ್ದರು. ಕಲ್ಯಾಣೋತ್ಸವದ ಮಾರ್ಗದರ್ಶಕ ಡಾ.ವಿದ್ವಾನ್ ವಿಜಯ್ ಮಂಜರ್ ಕಲ್ಯಾಣೋತ್ಸವದ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ವಹಿಸಿದ್ದರು. ಸಮಿತಿ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ ಸ್ವಾಗತಿಸಿ ಪರಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!