Saturday, October 3, 2026
Saturday, October 3, 2026

ಬೋಧಕರ ಅಭಿವೃದ್ಧಿ ಕಾರ್ಯಕ್ರಮ

ಬೋಧಕರ ಅಭಿವೃದ್ಧಿ ಕಾರ್ಯಕ್ರಮ

Date:

ಬಸ್ರೂರು, ಫೆ.15: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ ಕಾಲೇಜಿನ ಶೀ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೆ ರಾಧಾಕೃಷ್ಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸಕರಿಗೆ ಶೈಕ್ಷಣಿಕ ಅಭಿವೃದ್ಧಿ, ತರಬೇತಿ, ಸಂಶೋಧನೆ, ತಂತ್ರಜ್ಞಾನದ ಬಳಕೆ ಬಗ್ಗೆ ಮಾಹಿತಿ ಅತಿ ಅಗತ್ಯವಾಗಿದೆ ಎಂದರು. ಉಪನ್ಯಾಸಕರು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಜೈನ್ ಪರಿಗಣಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಅನಿಲಾ ಬಾಜಪೇಯಿ ಭಾಗವಹಿಸಿ ಉಪನ್ಯಾಸಕರಿಗೆ ತರಬೇತಿ ನೀಡಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ರವಿಚಂದ್ರ ಕಾರ್ಯಕ್ರಮ ಸಂಯೋಜಿಸಿದರು. ಐಕ್ಯೂಏಸಿ ಸಂಯೋಜಕರಾದ ಸಂದೀಪ್ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ದೀಪಕ್ ಕುಮಾರ್ ಶೆಟ್ಟಿ ವಂದಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!