Tuesday, October 6, 2026
Tuesday, October 6, 2026

ಕೋಟಿ-ಚೆನ್ನಯ್ಯರ ನಡೆ ನುಡಿ ಶಾಶ್ವತ: ಸಂಗೀತಾ ಕುಲಾಲ್

ಕೋಟಿ-ಚೆನ್ನಯ್ಯರ ನಡೆ ನುಡಿ ಶಾಶ್ವತ: ಸಂಗೀತಾ ಕುಲಾಲ್

Date:

ಗಣಿತನಗರ, ಫೆ.16: ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರ ಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಸಂಗೀತಾ ಕುಲಾಲ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವೃಂದದ ಸದಸ್ಯರಾದ ಉಷಾ ರಾವ್ ಯು., ಗಾಯತ್ರಿ ನಾಗೇಶ್, ಚೇತನಾ ಸಂದೀಪ್, ಅಕ್ಷತಾ ಹಾಗೂ ಲಕ್ಷ್ಮಿ ಉಪಸ್ಥಿತರಿದ್ದರು. ಬಾಲಸಂಸ್ಕಾರದ ಬಾಲಕ ಬ್ರಿಜೇಶ್ ಕಾರ್ಯಕ್ರಮ ನಿರೂಪಿಸಿ, ಆಯುಶ್ ಯು ಶೆಟ್ಟಿ ವಂದಿಸಿದರು. ಆರಾಧ್ಯ ಶ್ರೀ ರಾಮರಕ್ಷಾ ಸ್ತೋತ್ರವನ್ನು ಹಾಗೂ ಪ್ರೇರಣಾ ಬೋರ್ಕರ್ ಭಗವದ್ಗೀತೆಯ ಮೊದಲ ಹತ್ತು ಶ್ಲೋಕವನ್ನು ವಾಚಿಸಿದರು. ಬಾಲ ಸಂಸ್ಕಾರಕ್ಕೆ ಸೇರಲಿಚ್ಚಿಸುವ ಕಾರ್ಕಳ ತಾಲೂಕಿನ ಮಕ್ಕಳ ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ಮಕ್ಕಳ ಹೆಸರನ್ನು ಈ ತಿಂಗಳ 28ನೇ ತಾರಿಕಿನೊಳಗಾಗಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9902192469 ಸಂಪರ್ಕಿಸಬಹುದು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!