ಅಲೆವೂರು, ಫೆ.17: ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಪನ್ನಗೊಂಡಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಶುಭ ಹಾರೈಸಿದರು.
ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಮೃತ ಯು ಪೂಜಾರಿ, ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ನಾಯಕ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೇಖರ್ ಆಚಾರ್ಯ, ನಿವೃತ್ತ ಮುಖ್ಯೋಪಾಧ್ಯಾಯಿನಿ ವಾರಿಜ ಶೇಡ್ತಿ, ಪ್ರಾಂಶುಪಾಲರಾದ ಡಾ. ರಾಮು ಎಲ್., ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಬಿ ಎಸ್., ಪೂರ್ಣಪ್ರಜ್ಞ ಕಾಲೇಜು ಆಡಳಿತಾಧಿಕಾರಿ ಪುಂಡರೀಕಾಕ್ಷ ಕೊಡಂಚ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಡಾ. ನಾಗರಾಜ್ ಜಿ.ಪಿ., ಸುಪರ್ಣ, ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿಗಳಾದ ಮಹೇಶ್ ಶೆಟ್ಟಿ, ಸ್ವಾತಿ, ಸ್ವಾತಿ ಪಿ.ಕೆ., ಉಪಸ್ಥಿತರಿದ್ದರು.